![]() |

ಇವಿಸ್ಟೇ ಅಲ್ಲ ನನ್ನ ಬಾಲ ಲೀಲೆಗಳು ಅಪಾರ. ಅವೆಲ್ಲವನ್ನು ಈಗ ನೆನಪಿಸಿಕೊಂಡಾಗ ಅವೆಲ್ಲ ಬದುಕಿನ ಮೇಸ್ಟ್ರು ಗಳಾಗಿವೆ, ಅವುಗಳಿಂದ ಕಲಿಯುವುದು ಬಹಳಸ್ಟಿದೆ. ಆದರೆ ನಾವು ದೊಡ್ಡವರಾಗುತ್ತಾ ಹೋದ ಹಾಗೆ ನಮ್ಮೊಳಗಿನ " ಮಗು" ವನ್ನು ಕೊಂದುಬಿಡುತ್ತೇವೆ ಏನೋ ಅನ್ನಿಸುತ್ತದೆ.
ಇಸ್ಟೆಲ್ಲಾ ನೆನಪಾಗಿದ್ದು, ನನ್ನ ಮುದ್ದು ಕಂದಮ್ಮ " ಹಿಮಘ ತೇಜಸ್ " ನ ತುಂಟಾಟಗಳನ್ನು ನೋಡಿ. 8 ತಿಂಗಳ ಮನುಷ್ಯ......! , ಹಾಸಿಗೆಯಲ್ಲಿಯೇ ಈಜುತ್ತಾನೆ,ಪಟ ಪಟ ಕೈ ಕಾಲು ಬಡಿದು ಡ್ಯಾನ್ಸ್ ಮಾಡುತ್ತಾನೆ, ಮುಖಕ್ಕೆ ಹತ್ತಿರ ಇಟ್ಟು ಕೊಂಡರೆ ಕೆನ್ನೆಗೆ ರಪ ರಪ, ಹಲ್ಲೆ ಹುಟ್ಟಿಲ್ಲದ ಬಾಯಿಯಲ್ಲಿ, ತಾ ತಾ, ಆ...ಮ... ,ಆಮ್...,ಕೀ..........ಮತ್ತು ಅವನದೇ ಸಂಗೀತ ಹೇಳುತ್ತಾನೆ, ರಾಮ ರಾಮ ಎಂದು ನಾವು ಹೇಳಿದರೆ ಅವನು ಪುಟ್ಟ ಎರಡು ಕೈಗಳನ್ನು ಒಂದಕ್ಕೊಂದು ಬಡಿಯುತ್ತಾ ಭಜನೆ ಮಾಡುತ್ತಾನೆ....8 ತಿಂಗಳ ಮನುಷ್ಯ ....!
ಅಬ್ಬಾ.. ಎಂತಹ ಮುಗ್ದ ನಗು, ತುಂಟಾಟ...! ಇಂದು ನಾನು ಅಪ್ಪನಾಗಿದ್ದೇನೆ, ಅಪ್ಪನಾದ ಮೇಲೆ ನಾನೇ ಮಗುವಾಗಿದ್ದೇನೆ, ನನ್ನ ಮಗ ತುಂಟ ನಗೆ ಬೀರುತ್ತಿದ್ದಾನೆ, ಯಾವುದರ ಮುನ್ಸೂಚನೆಯೋ, ನನ್ನಪ್ಪ ನೆನಪಾಗುತ್ತಿದ್ದಾರೆ......!!!!!